ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಬಿಜಿಎಸ್‌ ತಾಂತ್ರಿಕ ಮಹಾವಿದ್ಯಾಲಯ – ಪದವಿ ಪ್ರಧಾನ ಕಾರ್ಯಕ್ರಮ

||ಜೈ ಶ್ರೀ ಗುರುದೇವ್||

ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಬಿಜಿಎಸ್‌ ತಾಂತ್ರಿಕ ಮಹಾವಿದ್ಯಾಲಯ, ವತಿಯಿಂದ 2023-24 ನೇ ಪದವಿ ಪ್ರಧಾನ ಕಾರ್ಯಕ್ರಮವನ್ನು ದಿನಾಂಕ 19.11.2024 ರಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಕುಲಪತಿಗಳು ಹಾಗೂ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿರವರು ದಿವ್ಯಸಾನಿಧ್ಯವನ್ನು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಡಾ. ಎಸ್‌ ವೈ ಕುಲಕರ್ಣಿ, ವಿಶ್ರಾಂತ ಉಪಕುಲಪತಿಗಳು, ರೇವಾ ವಿಶ್ವವಿದ್ಯಾಲಯ ಹಾಗೂ ಡಾ. ಇ ಎಸ್‌ ಚಕ್ರವರ್ತಿ, ಸಲಹೆಗಾರರು, ಆದಿಚುಂಚನಗಿರಿ ವಿಶ್ವವಿದ್ಯಾಲಯ ಇವರನ್ನು ಆಹ್ವಾನಿಸಿ, ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಶಸ್ತಿಯನ್ನು ವಿತರಣೆ ಮಾಡಿದರು,
ಈ ಕಾರ್ಯಕ್ರಮದಲ್ಲಿ ಮಹಾಸ್ವಾಮೀಜಿರವರು ಪದವಿ ವಿದ್ಯಾರ್ಥಿಗಳಿಗೆ ಹಿತವಚನಗಳನ್ನು ತಿಳಿಸಿ, ಆಶೀರ್ವಚನವನ್ನು ನೀಡಿದರು, ಈ ಕಾರ್ಯಕ್ರಮದಲ್ಲಿ, ಡಾ. ಎಂ ಎ ಶೇಖರ್‌, ಉಪಕುಲಪತಿ, ಡಾ. ಸಿ ಕೆ ಸುಬ್ಬರಾಯ, ಕುಲಸಚಿವರು, ಆದಿಚುಂಚನಗಿರಿ ವಿಶ್ವವಿದ್ಯಾಲಯ ರವರು ಭಾಗವಹಿಸಿದರು. ಬಿಜಿಎಸ್ ತಾಂತ್ರಿಕ ವಿದ್ಯಾನಿಲಯದ ಪ್ರಾಂಶುಪಾಲರಾದ ಡಾ. ಬಿ ಎನ್ ಶೋಭಾ ಸ್ವಾಗತ ಭಾಷಣ ಮಾಡಿದರು. ಪ್ರಾಧ್ಯಾಪಕರಾದ ಡಾ. ಎಂ ಬಿ ಆನಂದರಾಜು ವಂದನಾರ್ಪಣೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜಿಎಸ್‌ ತಾಂತ್ರಿಕ ಮಹಾವಿದ್ಯಾಲಯದ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಮತ್ತು ಪೊಷಕರು ಉಪಸ್ಥಿತರಿದ್ದರು.

We are using cookies to give you the best experience. You can find out more about which cookies we are using or switch them off in privacy settings.
AcceptPrivacy Settings

GDPR

  • GDPR

GDPR